Genesis 31:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರಾತ್ರಿ ದೇವರು ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆಯಾಗಿರು; ನೀನು ಯಾಕೋಬನಿಗೆ ಹೇಳುವ ಪ್ರತಿಯೊಂದು ಮಾತಿನ ಬಗ್ಗೆ ಎಚ್ಚರಿಕೆಯಾಗಿರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.
Kannada BSI Bible 2016
ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.
Kannada Bible (KNCL) BSI 2016
ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.