Genesis 31:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಲಾಬಾನನೂ ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಕೊಂಡನು.
Kannada BSI Bible 2016
ತರುವಾಯ ಲಾಬಾ ನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹೋದರರ ಸಂಗಡ ಗಿಲ್ಯಾದ್‌ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ಯಾಕೋಬನನ್ನು ಸಂಧಿಸಿದಾಗ ಯಾಕೋಬನು ಬೆಟ್ಟದಲ್ಲಿ ತನ್ನ ಗುಡಾರವನ್ನು ಹಾಕಿಸಿದನು. ಲಾಬಾನನೂ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿದ್ದನು.
Kannada Bible (KNCL) BSI 2016
ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.