Genesis 31:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ಯಾಕೋಬನಿಗೆ, “ನೀನು ನನಗೇಕೆ ಮೋಸ ಮಾಡಿದೆ? ಯುದ್ಧದಲ್ಲಿ ಸೆರೆ ಒಯ್ಯುವ ಸ್ತ್ರೀಯರಂತೆ, ನೀನು ನನ್ನ ಹೆಣ್ಣುಮಕ್ಕಳನ್ನು ಕರೆದುಕೊಂಡು ಬಂದದ್ದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು ಯಾಕೋಬನಿಗೆ, “ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಹೊರಟುಬಂದೆಯಲ್ಲಾ.
Kannada BSI Bible 2016
ಲಾಬಾನನು ಯಾಕೋಬನಿಗೆ--ನೀನು ಏನು ಮಾಡಿದಿ? ನನಗೆ ತಿಳಿಸದೆ ನೀನು ಕಳ್ಳನ ಹಾಗೆ ಓಡಿಬಂದಿಯಲ್ಲಾ. ನನ್ನ ಕುಮಾರ್ತೆಯರನ್ನು ಕತ್ತಿಯಿಂದ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಬಂದಿಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ಯಾಕೋಬನಿಗೆ - ಇದೇನು ನೀನು ಮಾಡಿದ್ದು? ನೀನು ನನ್ನ ಹೆಣ್ಣುಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದವರಂತೆ ತೆಗೆದುಕೊಂಡು ನನಗೆ ಏನೂ ಹೇಳದೆ ಓಡಿ ಬಂದಿಯಲ್ಲಾ.
Kannada Bible (KNCL) BSI 2016
ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ.