Genesis 31:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
Kannada BSI Bible 2016
ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು.
Kannada Bible (KNCL) BSI 2016
ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.