Genesis 31:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ? ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.
Kannada BSI Bible 2016
ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ತಂದೆಯ ಮನೆಗೆ ಹೋಗುವದಕ್ಕೆ ನಿನಗೆ ಬಹಳ ಆಶೆಯಿರುವದರಿಂದ ಹೋಗಬೇಕಾಯಿತು. ಅದಿರಲಿ; ನನ್ನ ದೇವರುಗಳನ್ನು ಕದ್ದದ್ದು ಯಾಕೆ ಎಂದು ಹೇಳಿದನು.
Kannada Bible (KNCL) BSI 2016
ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.