Genesis 31:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವರು ಸಾಯಲಿ. ನಮ್ಮ ಬಂಧುಗಳ ಮುಂದೆಯೇ ನನ್ನ ಆಸ್ತಿಯನ್ನು ಪರೀಕ್ಷಿಸಬಹುದು. ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ” ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Kannada BSI Bible 2016
ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇವರುಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ. ನಮ್ಮ ಬಂಧುಗಳ ಎದುರಾಗಿ ನನ್ನ ಸೊತ್ತನ್ನು ಪರೀಕ್ಷಿಸಬಹುದು; ಅದರಲ್ಲಿ ನಿನ್ನದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೋ ಎಂದು ಹೇಳಿದನು. ರಾಹೇಲಳು ಆ ದೇವರುಗಳನ್ನು ಕದ್ದದ್ದು ಯಾಕೋಬನಿಗೆ ತಿಳಿದಿರಲಿಲ್ಲ.
Kannada Bible (KNCL) BSI 2016
ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.