Genesis 31:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲ್ಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
Kannada BSI Bible 2016
ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಅವುಗಳನ್ನು ಕಂಡು ಕೊಳ್ಳಲಿಲ್ಲ; ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲಾಬಾನನು ಯಾಕೋಬನ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಆ ಇಬ್ಬರು ದಾಸಿಯರ ಗುಡಾರದಲ್ಲಿಯೂ ಹುಡುಕಿದನು. ಆದರೂ ಅವನಿಗೇನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಹೇಲಳ ಗುಡಾರಕ್ಕೆ ಬಂದನು.
Kannada Bible (KNCL) BSI 2016
ಲಾಬಾನನು ಯಕೋಬನ ಗುಡಾರದಲ್ಲೂ, ಲೇಯಳ ಗುಡಾರದಲ್ಲೂ ಹಾಗು ಆ ಇಬ್ಬರು ದಾಸಿಯರ ಗುಡಾರದಲ್ಲೂ ಹುಡುಕಿದನು. ಏನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಖೇಲಳ ಗುಡಾರಕ್ಕೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.