Genesis 31:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.
Kannada BSI Bible 2016
ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ಆ ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.
Kannada Bible (KNCL) BSI 2016
ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.