Genesis 31:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ವಸ್ತುಗಳನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನ ಬಳಗದವರ ಮುಂದೆಯೂ ನಿನ್ನ ಬಂಧುಗಳ ಮುಂದೆಯೂ ಅದನ್ನು ತಂದು ಇಡು. ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
Kannada BSI Bible 2016
ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಾಮಾನನ್ನೆಲ್ಲಾ ಪರೀಕ್ಷಿಸಿ ನೋಡುವಂತೆ ನಾನೇನು ತಪ್ಪುಮಾಡಿದೆನು? ನಿನ್ನ ಸೊತ್ತು ಏನಾದರೂ ನನ್ನಲ್ಲಿ ಸಿಕ್ಕಿದೆಯೋ? ನನ್ನವರ ಮುಂದೆಯೂ ನಿನ್ನವರ ಮುಂದೆಯೂ ಅದನ್ನು ತಂದಿಡು ನೋಡೋಣ; ಇವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
Kannada Bible (KNCL) BSI 2016
ನಾನು ಮಾಡಿದ ದ್ರೋಹವಾದರೂ ಏನು? ನೀವು ನನ್ನ ಸಾಮಾನುಗಳನ್ನೆಲ್ಲಾ ಪರೀಕ್ಷಿಸಿ ನೋಡಿದ್ದಾಯಿತು; ನಿಮ್ಮ ಸೊತ್ತೇನಾದರೂ ಸಿಕ್ಕಿದೆಯೇ? ಸಿಕ್ಕಿದ್ದರೆ ನನ್ನವರ ಮುಂದೆಯೂ ನಿಮ್ಮವರ ಮುಂದೆಯೂ ತಂದಿಡಿ, ನೋಡೋಣ. ಅವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.