Genesis 31:46 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ತನ್ನ ಜನರಿಗೆ ಮತ್ತಷ್ಟು ಕಲ್ಲುಗಳನ್ನು ತೆಗೆದುಕೊಂಡು ಬಂದು ಕಲ್ಲಿನ ಕುಪ್ಪೆ ಮಾಡುವಂತೆ ಹೇಳಿದನು. ಬಳಿಕ ಅವರು ಆ ಕುಪ್ಪೆಯ ಬಳಿಯಲ್ಲಿ ಊಟಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ” ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಗುಡ್ಡೆ ಮಾಡಿದರು. ಅವರೆಲ್ಲರೂ ಆ ಗುಡ್ಡೆಯ ಬಳಿಯಲ್ಲಿ ಭೋಜನವನ್ನು ಮಾಡಿದರು.
Kannada BSI Bible 2016
ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತನ್ನ ಕಡೆಯವರಿಗೆ - ಕಲ್ಲುಗಳನ್ನು ಕೂಡಿಸಿರಿ ಎಂದು ಹೇಳಲು ಅವರು ಕಲ್ಲುಗಳನ್ನು ಕೂಡಿಸಿ ಕುಪ್ಪೆಯನ್ನು ಮಾಡಿದಾಗ ಅವರೆಲ್ಲರೂ ಆ ಕುಪ್ಪೆಯ ಬಳಿಯಲ್ಲಿ ಸಹ ಭೋಜನವನ್ನು ಮಾಡಿದರು.
Kannada Bible (KNCL) BSI 2016
ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು.