Genesis 31:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಲಾಬಾನನು, “ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಗುಡ್ಡೆಯೇ ಸಾಕ್ಷಿ” ಎಂದು ಹೇಳಿದುದರಿಂದ ಅದಕ್ಕೆ ಗಲೇದ್ ಎಂದು ಹೆಸರಾಯಿತು.
Kannada BSI Bible 2016
ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹೊತ್ತು ನಿನಗೂ ನನಗೂ ಆದ ಒಡಂಬಡಿಕೆಗೆ ಈ ಕುಪ್ಪೆಯೇ ಸಾಕ್ಷಿ ಎಂದು ಹೇಳಿದ್ದರಿಂದ ಅದಕ್ಕೆ ಗಲೇದೆಂದು ಹೆಸರಾಯಿತು.
Kannada Bible (KNCL) BSI 2016
ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,