Genesis 31:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲಾಬಾನನು, “ನಾವು ಒಬ್ಬರನ್ನೊಬ್ಬರು ಅಗಲಿರುವಾಗ ಯೆಹೋವನೇ ನಮ್ಮನ್ನು ನೋಡಿಕೊಳ್ಳಲಿ” ಎಂದು ಹೇಳಿದನು. ಆದ್ದರಿಂದ ಆ ಸ್ಥಳಕ್ಕೆ ಮಿಚ್ಪಾ ಎಂದೂ ಹೆಸರಿಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಅವನು, “ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರುವನು” ಎಂದು ಹೇಳಿದ್ದರಿಂದ ಅದಕ್ಕೆ ಮಿಚ್ಪಾ ಎಂದು ಹೆಸರಾಯಿತು
Kannada BSI Bible 2016
ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಅವನು - ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವನೇ ನಮ್ಮುಭಯರನ್ನೂ ನೋಡಿಕೊಳ್ಳುತ್ತಾ ಇರುವನು ಎಂದು ಹೇಳಿದ್ದರಿಂದ ಅದಕ್ಕೆ ವಿುಚ್ಪಾ ಎಂದು ಹೆಸರಾಯಿತು.
Kannada Bible (KNCL) BSI 2016
ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.