Genesis 31:50 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.
Kannada BSI Bible 2016
ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಲಾಬಾನನು - ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ ಅಂದನು.
Kannada Bible (KNCL) BSI 2016
ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.