Genesis 31:52 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.
Kannada BSI Bible 2016
ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಡುಮಾಡುವದಕ್ಕೋಸ್ಕರ ನಾನಂತೂ ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು; ಹಾಗೆಯೇ ನೀನು ಈ ಕುಪ್ಪೆಯನ್ನೂ ಈ ಕಂಬವನ್ನೂ ದಾಟಿ ನನ್ನ ಬಳಿಗೆ ಬರಕೂಡದು; ಇದಕ್ಕೆ ಕುಪ್ಪೆಯೂ ಕಂಬವೂ ಈ ಎರಡೇ ಸಾಕ್ಷಿ.
Kannada Bible (KNCL) BSI 2016
ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವುದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವುದಿಲ್ಲವೆಂಬುದಕ್ಕೆ ಈ ಕುಪ್ಪೆಯೂ ಈ ಸ್ತಂಭವೂ ಸಾಕ್ಷಿಯಾಗಿವೆ.