Genesis 31:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ” ಎಂದನು. ಅದೇ ಪ್ರಕಾರ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
Kannada BSI Bible 2016
ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.
Kannada Bible (KNCL) BSI 2016
ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.