Genesis 31:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿಮ್ಮ ತಂದೆ ನನಗೆ ಮೋಸ ಮಾಡಿದನು. ನಿಮ್ಮ ತಂದೆ ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದನು. ಆದರೆ ಆ ಸಮಯದಲ್ಲೆಲ್ಲ ದೇವರು ನನ್ನನ್ನು ಲಾಬಾನನ ಎಲ್ಲಾ ಮೋಸಗಳಿಂದ ಕಾಪಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
Kannada BSI Bible 2016
ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಚಪಲಚಿತ್ತನಾಗಿ ಹತ್ತುಸಾರಿ ನನ್ನ ಸಂಬಳವನ್ನು ಬದಲಾಯಿಸಿ ವಂಚಿಸಿದರೂ ನನಗೆ ಕೇಡುಮಾಡುವದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.
Kannada Bible (KNCL) BSI 2016
ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.