Genesis 32:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಂತಿರಲು, ದಯವಿಟ್ಟು ನನ್ನ ಅಣ್ಣನಿಂದ ನನ್ನನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿರುವೆ. ಏಸಾವನಿಂದ ನನ್ನನ್ನು ಕಾಪಾಡು. ಅವನು ಬಂದು ನಮ್ಮೆಲ್ಲರನ್ನೂ ತಾಯಂದಿರನ್ನೂ ಮಕ್ಕಳನ್ನೂ ಕೊಲ್ಲುವನೆಂಬ ಭಯ ನನಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
Kannada BSI Bible 2016
ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.