Genesis 32:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಾನು ನಿನಗೆ ಒಳ್ಳೆಯದನ್ನು ಮಾಡುವೆ. ನಾನು ನಿನ್ನ ಕುಟುಂಬವನ್ನು ಹೆಚ್ಚಿಸಿ ನಿನ್ನ ಮಕ್ಕಳನ್ನು ಸಮುದ್ರದ ಮರಳಿನಷ್ಟು ವೃದ್ಧಿಗೊಳಿಸುವೆನು. ಅವರು ಲೆಕ್ಕಿಸಲಾಗದಷ್ಟು ಅಸಂಖ್ಯಾತವಾಗಿರುವರು’ ಎಂದು ನೀನು ನನಗೆ ವಾಗ್ದಾನ ಮಾಡಿದಿಯಲ್ಲವೇ” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
Kannada BSI Bible 2016
ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.
Kannada Bible (KNCL) BSI 2016
ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.