Genesis 32:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಆ ರಾತ್ರಿ ಅಲ್ಲಿಯೇ ಉಳಿದುಕೊಂಡು ಏಸಾವನಿಗೆ ಉಡುಗೊರೆಯಾಗಿ ಕೊಡಲು ಕೆಲವು ವಸ್ತುಗಳನ್ನು ಸಿದ್ಧಗೊಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
Kannada BSI Bible 2016
ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ರಾತ್ರಿ ಅಲ್ಲೇ ಇಳುಕೊಂಡು ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ,
Kannada Bible (KNCL) BSI 2016
ಯಕೋಬನು ಆ ರಾತ್ರಿಯನ್ನು ಅಲ್ಲೇ ಕಳೆದನು. ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ, ಇಪ್ಪತ್ತು ಟಗರು, ಹಾಲು ಕರೆಯುವ ಮೂವತ್ತು ಒಂಟೆ ಮತ್ತು ಅವುಗಳ ಮರಿ, ನಲವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತನ್ನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.