Genesis 32:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಅವರಿಗೆ ಅವರವರ ಕರ್ತವ್ಯಗಳನ್ನು ತಿಳಿಸಿದನು. ಯಾಕೋಬನು ಪಶುಗಳ ಮೊದಲನೆ ಗುಂಪಿನ ಸೇವಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನ ಬಳಿಗೆ ಬಂದು, ‘ಇವು ಯಾರ ಪಶುಗಳು? ನೀನು ಎಲ್ಲಿಗೆ ಹೋಗುತ್ತಿರುವೆ? ನೀನು ಯಾರ ಸೇವಕನು?’ ಎಂದು ಕೇಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,
Kannada BSI Bible 2016
ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ಹಿಂಡಿನ ಮೇಲಿದ್ದವನಿಗೆ - ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು- ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತಿ? ನಿನ್ನ ಮುಂದೆ ಇರುವ ಇವೆಲ್ಲಾ ಯಾರವು ಎಂದು ಕೇಳಿದರೆ
Kannada Bible (KNCL) BSI 2016
ಮೊದಲನೆಯ ಹಿಂಡಿನ ಆಳಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, “ನೀನು ಯಾರ ಆಳು? ಎಲ್ಲಿಗೆ ಹೋಗುತ್ತಿರುವೆ? ನಿನ್ನ ಮುಂದೆ ಇರುವ ಇವೆಲ್ಲ ಯಾರವು?” ಎಂದು ಕೇಳಿದರೆ ನೀನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,