Genesis 32:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅವನಿಗೆ, ‘ಇದು ನಿನಗೆ ಕಳುಹಿಸಿರುವ ಉಡುಗೊರೆ. ಅಲ್ಲದೆ ನಿನ್ನ ಸೇವಕನಾದ ಯಾಕೋಬನು ನಮ್ಮ ಹಿಂದೆ ಬರುತ್ತಿದ್ದಾನೆ’ ಎಂದು ಹೇಳಬೇಕು” ಎಂದು ತಿಳಿಸಿದನು. “ನಾನು ಈ ಜನರನ್ನು ಉಡುಗೊರೆಗಳೊಡನೆ ಮುಂದೆ ಕಳುಹಿಸಿದರೆ, ಒಂದುವೇಳೆ ಏಸಾವನು ನನ್ನನ್ನು ಕ್ಷಮಿಸಿ ನನ್ನನ್ನು ಸ್ವೀಕರಿಸಿಕೊಳ್ಳಬಹುದು” ಎಂಬುದು ಯಾಕೋಬನ ಆಲೋಚನೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
Kannada BSI Bible 2016
ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.
Kannada Bible (KNCL) BSI 2016
‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.