Genesis 32:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲರನ್ನೂ ಹೊಳೆ ದಾಟಿಸಿದ ಮೇಲೆ ಕೊನೆಯವನಾಗಿ ತಾನೊಬ್ಬನೇ ಹೊಳೆದಾಟಲು ನಿಂತಿದ್ದಾಗ ಒಬ್ಬ ಪುರುಷನು ಬಂದು ಸೂರ್ಯೋದಯದವರೆಗೂ ಹೋರಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
Kannada BSI Bible 2016
ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
Kannada Bible (KNCL) BSI 2016
ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.