Genesis 32:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪುರುಷನು ಯಾಕೋಬನಿಗೆ, “ನನ್ನನ್ನು ಬಿಡು, ಸೂರ್ಯೋದಯವಾಗುತ್ತಿದೆ” ಎಂದು ಹೇಳಿದನು. ಆದರೆ ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನು ಬಿಡುವುದಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
Kannada BSI Bible 2016
ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು.
Kannada Bible (KNCL) BSI 2016
ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.