Genesis 32:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
Kannada BSI Bible 2016
ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು - ನಿನ್ನ ಹೆಸರನ್ನು ನನಗೆ ತಿಳಿಸಬೇಕು ಸ್ವಾಮೀ ಅಂದಾಗ ಆ ಪುರುಷನು - ನನ್ನ ಹೆಸರನ್ನು ವಿಚಾರಿಸುವದೇಕೆ ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
Kannada Bible (KNCL) BSI 2016
ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.