Genesis 32:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನ ಅಣ್ಣನಾದ ಏಸಾವನು ಸೇಯೀರ್ ಎಂಬ ಸ್ಥಳದಲ್ಲಿ ವಾಸವಾಗಿದ್ದನು. ಈ ಸ್ಥಳವು ಎದೋಮಿನ ಗುಡ್ಡಗಾಡು ಪ್ರದೇಶವಾಗಿತ್ತು. ಯಾಕೋಬನು ತನ್ನ ಸಂದೇಶಕರ ಮೂಲಕ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
Kannada BSI Bible 2016
ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯಾಕೋಬನು ಎದೋಮ್ಯರ ದೇಶವಾಗಿರುವ ಸೇಯೀರ್‍ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ಮುಂದೆ ಕಳುಹಿಸಿದನು.
Kannada Bible (KNCL) BSI 2016
ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.