Genesis 32:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
Kannada BSI Bible 2016
ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.