Genesis 32:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಅವನು ಪೆನೀಯೇಲ್‌ನಿಂದ ಹೊರಟುಹೋಗುತ್ತಿರುವಾಗ ಸೂರ್ಯೋದಯವಾಯಿತು. ಯಾಕೋಬನು ತನ್ನ ಕೀಲುನೋವಿನಿಂದ ಕುಂಟುತ್ತಾ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
Kannada BSI Bible 2016
ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಅವನು ತೊಡೆಯ ನಿವಿುತ್ತ ಕುಂಟಿಕೊಂಡು ನಡೆದನು.
Kannada Bible (KNCL) BSI 2016
ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.