Genesis 32:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.
Kannada BSI Bible 2016
ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.
Kannada Bible (KNCL) BSI 2016
ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.