Genesis 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,
Kannada BSI Bible 2016
ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ
Kannada Bible (KNCL) BSI 2016
ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.