Genesis 32:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
Kannada BSI Bible 2016
ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನೂ ಕುರಿ ದನ ಒಂಟೆಗಳನ್ನೂ ಎರಡು ಪಾಳೆಯ ಮಾಡಿ -
Kannada Bible (KNCL) BSI 2016
ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.