Genesis 32:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಂದುವೇಳೆ ಏಸಾವನು ಬಂದು ಒಂದು ಗುಂಪನ್ನು ನಾಶಗೊಳಿಸಿದರೆ, ಮತ್ತೊಂದು ಗುಂಪು ಓಡಿಹೋಗಿ ತಪ್ಪಿಸಿಕೊಳ್ಳಬಹುದು” ಎಂಬುದು ಅವನ ಆಲೋಚನೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
Kannada BSI Bible 2016
ಏಸಾವನು ಒಂದು ಗುಂಪಿನ ಮೇಲೆ ಬಿದ್ದು ಅದನ್ನು ಹೊಡೆದರೆ ಉಳಿದ ಗುಂಪು ತಪ್ಪಿಸಿಕೊಂಡು ಹೋದೀತೆಂದು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನು ಒಂದು ಪಾಳೆಯದ ಮೇಲೆ ಬಿದ್ದರೂ ಮತ್ತೊಂದು ಪಾಳೆಯವು ತಪ್ಪಿಸಿಕೊಂಡು ಹೋಗುವದು ಅಂದುಕೊಂಡನು.
Kannada Bible (KNCL) BSI 2016
ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.