Genesis 33:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಜನರೊಂದಿಗೆ ಬರುವುದನ್ನು ಕಂಡನು. ಯಾಕೋಬನು ತನ್ನ ಕುಟುಂಬವನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಿದನು. ಲೇಯಾ ಮತ್ತು ಅವಳ ಮಕ್ಕಳು ಒಂದು ಗುಂಪಿನಲ್ಲಿದ್ದರು. ರಾಹೇಲಳು ಮತ್ತು ಯೋಸೇಫನು ಇನ್ನೊಂದು ಗುಂಪಿನಲ್ಲಿದ್ದರು. ಇಬ್ಬರು ದಾಸಿಯರು ಮತ್ತು ಅವರ ಮಕ್ಕಳು ಎರಡು ಗುಂಪುಗಳಲ್ಲಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಜನರ ಸಮೇತ ಬರುವುದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ
Kannada BSI Bible 2016
ಯಾಕೋಬನು ಕಣ್ಣೆತ್ತಿ ನೋಡಿದಾಗ ಇಗೋ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಮನುಷ್ಯರ ಸಮೇತ ಬರುವದನ್ನು ಕಂಡನು. ಆಗ ಅವನು ಲೇಯಳಿಗೂ ರಾಹೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ
Kannada Bible (KNCL) BSI 2016
ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.