Genesis 33:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ.
Kannada BSI Bible 2016
ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ.
Kannada Bible (KNCL) BSI 2016
ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,