Genesis 33:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.
Kannada BSI Bible 2016
ಆದದರಿಂದ ನನ್ನ ಒಡೆಯನೇ, ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯಾರಿಗೆ ಬರುವ ವರೆಗೆ ನನ್ನ ಮುಂದಿರುವ ಮಂದೆಗಳ ನಡಿಗೆಗೂ ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು.
Kannada Bible (KNCL) BSI 2016
ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.