Genesis 33:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಏಸಾವನು, “ಹಾಗಾದರೆ ನನ್ನ ಜನರಲ್ಲಿ ಕೆಲವರನ್ನು ನಿನ್ನ ಸಹಾಯಕ್ಕಾಗಿ ಬಿಟ್ಟುಹೋಗುವೆನು” ಎಂದು ಹೇಳಿದನು. ಆದರೆ ಯಾಕೋಬನು, “ಅದು ನಿನ್ನ ದಯೆ. ಆದರೆ ಅಂಥ ಅಗತ್ಯವೇನೂ ಇಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.
Kannada BSI Bible 2016
ಅದಕ್ಕೆ ಏಸಾವನು--ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು--ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನು - ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ ಅನ್ನಲು ಯಾಕೋಬನು - ಅದೇಕೆ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು ಎಂದು ಹೇಳಿದನು.
Kannada Bible (KNCL) BSI 2016
ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.