Genesis 33:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
Kannada BSI Bible 2016
ಯಾಕೋ ಬನು ಪ್ರಯಾಣಮಾಡಿ ಸುಕ್ಕೋತಿಗೆ ಹೋಗಿ ಮನೆಯನ್ನು ಕಟ್ಟಿಸಿಕೊಂಡನು; ಇದಲ್ಲದೆ ತನ್ನ ಮಂದೆಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್‌ ಎಂದು ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.
Kannada Bible (KNCL) BSI 2016
ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.