Genesis 33:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯಾಕೋಬನು ಕಾನಾನ್ ದೇಶದ ಶೆಕೆಮ್ ಪಟ್ಟಣಕ್ಕೆ ಬಂದು ತನ್ನ ಪಾಳೆಯನ್ನು ಪಟ್ಟಣದ ಸಮೀಪದಲ್ಲಿದ್ದ ಒಂದು ಹೊಲದಲ್ಲಿ ಹಾಕಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
Kannada BSI Bible 2016
ಯಾಕೋಬನು ಪದ್ದನ್‌ ಅರಾಮಿನಿಂದ ಬಂದು ಕಾನಾನ್‌ ದೇಶದ ಶೆಕೆಮಿನಲ್ಲಿರುವ ಸಾಲೆಮ್‌ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಪದ್ದನ್ಅರಾವಿುನಿಂದ ಬಂದ ಮೇಲೆ ಕಾನಾನ್‍ದೇಶದ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಊರಿನ ಮುಂದೆ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
Kannada Bible (KNCL) BSI 2016
ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.