Genesis 33:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಶೆಕೆಮನ ತಂದೆಯಾದ ಹಮೋರನ ಕುಟುಂಬದಿಂದ ಆ ಹೊಲವನ್ನು ಕೊಂಡುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂಮಿಯನ್ನು ಹಮೋರನ ಮಕ್ಕಳಿಗೆ ನೂರು ನಾಣ್ಯ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
Kannada BSI Bible 2016
ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಗುಡಾರಗಳನ್ನು ಹಾಕಿಸಿದ ಭೂವಿುಯನ್ನು ಹಮೋರನ ಮಕ್ಕಳಿಗೆ ನೂರು ವರಹಾ ಕೊಟ್ಟು ಅವರಿಂದ ಕೊಂಡುಕೊಂಡನು. ಹಮೋರನು ಶೆಕೆಮನ ತಂದೆ.
Kannada Bible (KNCL) BSI 2016
ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.