Genesis 33:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು, “ನಿನ್ನ ಜೊತೆಯಲ್ಲಿರುವ ಜನರು ಯಾರು?” ಎಂದು ಕೇಳಲು ಯಾಕೋಬನು ಅವನಿಗೆ, “ದೇವರು ನಿನ್ನ ಸೇವಕನಿಗೆ ಕೃಪೆಯಿಂದ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು” ಎಂದು ಹೇಳಿದನು.
Kannada BSI Bible 2016
ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಏಸಾವನು ಕಣ್ಣೆತ್ತಿ ಆ ಸ್ತ್ರೀಯರನ್ನೂ ಮಕ್ಕಳನ್ನೂ ಕಂಡು - ನಿನ್ನ ಜೊತೆಯಲ್ಲಿರುವ ಇವರು ಯಾರೆಂದು ಕೇಳಲು ಯಾಕೋಬನು ಅವನಿಗೆ - ದೇವರು ನಿನ್ನ ಸೇವಕನಿಗೆ ಅನುಗ್ರಹಿಸಿಕೊಟ್ಟ ಮಕ್ಕಳೇ ಇವರು ಎಂದು ಹೇಳಿದನು.
Kannada Bible (KNCL) BSI 2016
ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.