Genesis 33:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.
Kannada BSI Bible 2016
ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನು - ನಾನು ದಾರಿಯಲ್ಲಿ ಕಂಡ ಆ ಪಶುಗಳ ಹಿಂಡುಗಳು ಯಾತಕ್ಕೆ ಎಂದು ಕೇಳಲು ಯಾಕೋಬನು - ಸ್ವಾವಿುಯವರ ದಯ ನನಗೆ ದೊರಕಬೇಕೆಂದು ನಾನು ತಮಗೆ ಕಳುಹಿಸಿಕೊಟ್ಟೆನು ಅಂದನು.
Kannada Bible (KNCL) BSI 2016
ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.