Genesis 34:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
Kannada BSI Bible 2016
ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಬೇಕು ಎಂದು ಹೇಳಿದನು.
Kannada Bible (KNCL) BSI 2016
ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.