Genesis 34:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು.
Kannada BSI Bible 2016
ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ಕಪಟದಿಂದ ಉತ್ತರಕೊಟ್ಟು -
Kannada Bible (KNCL) BSI 2016
ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.