Genesis 34:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಿಮ್ಮ ಗಂಡಸರು ನಮ್ಮ ಸ್ತ್ರೀಯರನ್ನು ಮದುವೆಯಾಗಬಹುದು ಮತ್ತು ನಮ್ಮ ಗಂಡಸರು ನಿಮ್ಮ ಸ್ತ್ರೀಯರನ್ನು ಮದುವೆಯಾಗಬಹುದು. ಆಗ ನಾವು ಒಂದೇ ಜನಾಂಗವಾಗುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
Kannada BSI Bible 2016
ನಮ್ಮ ಕುಮಾರ್ತೆಯರನ್ನು ನಿಮಗೆ ಕೊಟ್ಟು ನಿಮ್ಮ ಕುಮಾರ್ತೆಯರನ್ನು ತಕ್ಕೊಳ್ಳುವೆವು. ಇದಲ್ಲದೆ ನಾವು ನಿಮ್ಮಲ್ಲಿ ವಾಸಮಾಡಿ ಒಂದೇ ಜನಾಂಗವಾಗುವೆವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪಿ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು.
Kannada Bible (KNCL) BSI 2016
ಹಾಗೆ ಮಾಡಿಸಿಕೊಂಡರೆ ಮಾತ್ರ ನಾವು ನಿಮ್ಮ ಮಾತಿನಂತೆ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡಬಹುದು, ನಿಮ್ಮ ಹೆಣ್ಣು ಮಕ್ಕಳನ್ನು ನಾವು ತೆಗೆದುಕೊಳ್ಳಬಹುದು; ನಿಮ್ಮಲ್ಲಿ ವಾಸಮಾಡಿ, ನಿಮ್ಮೊಡನೆ ಒಂದೇ ಕುಲವಾಗಿರಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು.