Genesis 34:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
Kannada BSI Bible 2016
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ ಆ ಕಾರ್ಯವನ್ನು ಮಾಡು ವದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು.
Kannada Bible (KNCL) BSI 2016
ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.