Genesis 34:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
Kannada BSI Bible 2016
ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕೆನ್ನುತ್ತಾರೆ; ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸಿಸುವದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವದಕ್ಕೂ ಒಪ್ಪುವರು.
Kannada Bible (KNCL) BSI 2016
ಆದರೆ ಅವರು ಸುನ್ನತಿಮಾಡಿಕೊಂಡವರು. ಆದ್ದರಿಂದ ನಮ್ಮಲ್ಲಿಯೂ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು ಎನ್ನುತ್ತಾರೆ. ಹಾಗೆ ಮಾಡಿಸಿಕೊಂಡರೆ ಮಾತ್ರ ಇವರು ನಮ್ಮಲ್ಲಿ ವಾಸಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು.