Genesis 34:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
Kannada BSI Bible 2016
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಪಟ್ಟದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
Kannada Bible (KNCL) BSI 2016
ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.