Genesis 34:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.
Kannada BSI Bible 2016
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು
Kannada Bible (KNCL) BSI 2016
ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.