Genesis 34:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
Kannada BSI Bible 2016
ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು
Kannada Bible (KNCL) BSI 2016
ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.