Genesis 34:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
Kannada BSI Bible 2016
ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.
Kannada Bible (KNCL) BSI 2016
ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾಯಿತೆಂಬ ಸಮಾಚಾರ ಯಕೋಬನಿಗೆ ಮುಟ್ಟಿದಾಗ ಅವನ ಗಂಡು ಮಕ್ಕಳು ಅಡವಿಯಲ್ಲಿ ದನಕಾಯುತ್ತಿದ್ದರು. ಅವರು ಬರುವ ತನಕ ಯಕೋಬನು ಸುಮ್ಮನೆ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.