Genesis 35:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಯಾಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾ ಹತ್ತಿ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿ ಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ, ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.
Kannada BSI Bible 2016
ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.
Kannada Bible (KNCL) BSI 2016
ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.